ಕೇಂದ್ರ ಬಜೆಟ್; ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಳ
ನವದೆಹಲಿ: ಈ ಬಾರಿಯ ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಶನಿವಾರ ಬಜೆಟ್ ಮಂಡಿಸಿದರು. ಮಧ್ಯಮ ವರ್ಗದ ಬಹು ದಿನಗಳ ಬೇಡಿಕೆಯಂತೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸುವ ಭರವಸೆ ಪ್ರಕಟಿಸಿದರು.
ಹೊಸ ತೆರಿಗೆ ಪದ್ಧತಿಯಂತೆ 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ.
4 ಲಕ್ಷದಿಂದ 8 ಲಕ್ಷದವರೆಗೆ ಶೇ.5 ತೆರಿಗೆ,
8 ಲಕ್ಷದಿಂದ 11 ಲಕ್ಷದವರೆಗೆ ಶೇ.10 ತೆರಿಗೆ,
12 ಲಕ್ಷದಿಂದ 15 ಲಕ್ಷದವರೆಗೆ ಶೇ.15 ತೆರಿಗೆ,
15 ಲಕ್ಷದಿಂದ 20 ಲಕ್ಷದವರೆಗೆ ಶೇ.20 ತೆರಿಗೆ
20 ಲಕ್ಷದಿಂದ 24 ಲಕ್ಷದರೆಗೆ ಶೇ.25 ತೆರಿಗೆ
24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ
ಹೊಸ ತೆರಿಗೆ ಪದ್ಧತಿ ಅನ್ವಯ 4 ಲಕ್ಷ ರೂ ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. ಹಿರಿಯ ನಾಗರಿಕರಿಗೆ ತೆರಿಗೆ ಕಡಿತದ ಮಿತಿಯನ್ನು 1 ಲಕ್ಷ ರೂ.ಗೆ ದ್ವಿಗುಣಗೊಳಿಸಲಾಗಿದೆ ಎಂದು ಪ್ರಕಟಿಸಿದ ನಿರ್ಮಲಾ ಸೀತಾರಾಮನ್ ಬಾಡಿಗೆ ಮೇಲಿನ ಟಿಡಿಎಸ್ನ ವಾರ್ಷಿಕ ಮಿತಿಯನ್ನು 2.4 ಲಕ್ಷ ರೂ.ಗಳಿಂದ 6 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದರು.