ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

0
Central-Vista-New-Parliament-Building-750x408-1-2

ನವದೆಹಲಿ: ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ದೆಹಲಿಯ ಸೇವಾ ತೀರ್ಥದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕ್ಷೇತ್ರ ಪುನರ್‌ವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಕೆಲವು ತಿದ್ದುಪಡಿಗಳೊಂದಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

ಕ್ಷೇತ್ರ ಮರುವಿಂಗಡಣೆ ಬಳಿಕ ಯಾವುದೇ ರಾಜ್ಯದ ಲೋಕಸಭಾ ಪ್ರಾತಿನಿಧ್ಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳುವುದು ಹಾಗೂ ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತದಲ್ಲಿ ಬದಲಾವಣೆಯಾಗದಂತೆ ತಿದ್ದುಪಡಿ ರೂಪಿಸುವುದು ಮಸೂದೆಯ ಪ್ರಮುಖ ಉದ್ದೇಶವಾಗಿದೆ.

ಮುಂದಿನ ವಾರ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲೇ ಮಸೂದೆ ಅಂಗೀಕರಿಸಲು ಸರ್ಕಾರ ಸಿದ್ಧತೆ ನಡೆಸಿದೆ.

Leave a Reply

Your email address will not be published. Required fields are marked *