ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ
ಹಾವೇರಿ: ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಕ್ಫ್ ವಿವಾದ ಕುರಿತು ಬಿಜೆಪಿ ನಡೆಸಿರುವ ಪ್ರತಿಭಟನೆ ಬಗ್ಗೆ ಹಾವೇರಿ ಜಿಲ್ಲೆ ಶಿಗ್ಗಾವಿ ಬಳಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿಯವರು ಉಪ ಚುನಾವಣೆಗೋಸ್ಕರ ರಾಜಕೀಯ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದಾರೆ ಎಂದು ಆರೋಪಿಸಿದರು.
ಯಾವ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್ನವರು ಯಾವ ಕಾರಣಕ್ಕೂ ಖಾಲಿ ಮಾಡಿಸುವುದಿಲ್ಲ ಎಂದು ಭರವಸೆ ನೀಡಿದ ಸಿಎಂ, ಕಂದಾಯ ದಾಖಲೆಗಳಲ್ಲಿ ಇರುವ ವಕ್ಫ್ ಹೆಸರುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದರು.