ಯಶವಂತಪುರದಲ್ಲಿ ಎಸ್.ಟಿ‌.ಸೋಮಶೇಖರ್‌ ಗರಡಿ ಸೇರಿದ ಜೆಡಿಎಸ್-ಕಾಂಗ್ರೆಸ್ ನಾಯಕರು

0

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉದ್ದಂಡಹಳ್ಳಿಯಲ್ಲಿ 50ಕ್ಕೂ ಅಧಿಕ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಹಕಾರ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ.ಸೋಮಶೇಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಕ್ಷದ ಶಾಲು ಹಾಕಿ ಈ ನಾಯಕರನ್ನು ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಕಾರ್ಯಕರ್ತರು, ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ನಾವು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇವೆ ಎಂದರು.

20 ವರ್ಷಗಳಿಗೂ ಅಧಿಕ ಕಾಲ ಜೆಡಿಎಸ್ ಗಾಗಿ ದುಡಿದೆವು. ಆದರೆ ಅವರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಲಿಲ್ಲ.ಜೆಡಿಎಸ್ ನಾಯಕರು ಗ್ರಾಮದ ಜನರೊಂದಿಗೆ ದರ್ಪದಿಂದ ಮಾತನಾಡುತ್ತಾರೆ. ಗ್ರಾಮದ ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದರೆ ಚುನಾವಣೆ ಸಂದರ್ಭದಲ್ಲಿ ಹಣ ನೀಡಲಿಲ್ಲವೇ ಎನ್ನುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೂಲಿವಾರ ಬಸವರಾಜ್, ಯಶವಂತಪುರ ವಿಧಾನಸಭಾ ಕ್ಷೇತ್ರ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಜಗದೀಶ್, ಯುವ ಮುಖಂಡರಾದ ನಿಶಾಂತ್ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ನೆಲಗುಳಿ ಪಂಚಾಯತಿ ವ್ಯಾಪ್ತಿಯ ನೆಲಗುಳಿ, ರಾವುಗೋಡ್ಲು, ನೆಟ್ಟಿಗೆರೆ, ಬೋಳಾರೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಗ್ರಾಮಸ್ಥರು, ಮುಖಂಡರು, ಪಂಚಾಯತಿ ಸದಸ್ಯರೊಂದಿಗೆ ಸಭೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು. ವಾರ್ಡ್ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು ಯಾವುದೇ ಸಮಸ್ಯೆಗಳಿದ್ದರು ಗಮನಕ್ಕೆ ತರುವಂತೆ ಹೇಳಿದರು.

ನೆಲಗುಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೃಷ್ಣಪ್ಪ, ಉಪಾಧ್ಯಕ್ಷರಾದ ಮುನಿರಾಜು, ಯಶವಂತಪುರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ರಂಗರಾಜು, ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed