ನಗರ ಸ್ಥಳೀಯ ಸಂಸ್ಥೆಗಳಿಗೆ ₹887 ಕೋಟಿ ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಯತೀಂದ್ರ ಮನವಿ

0
Yathindra-Siddaramaiah

ಬೆಂಗಳೂರು: ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದಡಿ ಬಾಕಿ ಉಳಿದಿರುವ ₹887 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಸತ್ಯೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದ ಸಚಿವರು, ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತು ಚರ್ಚಿಸಿದರು.

2025–26ನೇ ಸಾಲಿನಲ್ಲಿ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು ₹1,385 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಈ ಪೈಕಿ ₹887 ಕೋಟಿಯನ್ನು ರಾಜ್ಯದ ಇತರ 316 ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ₹498 ಕೋಟಿಯನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (GBA) ಮೀಸಲಿಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆಯಾಗಿರುವ ₹887 ಕೋಟಿ ಅನುದಾನ ಇನ್ನೂ ಬಿಡುಗಡೆಯಾಗಬೇಕಿದೆ. ಈ ಹಣವನ್ನು ಶೀಘ್ರ ಬಿಡುಗಡೆ ಮಾಡುವುದರಿಂದ ನಗರ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರೆಯಲಿದೆ ಎಂದು ಸಚಿವರು ಮನವರಿಕೆ ಮಾಡಿಕೊಟ್ಟಿದ್ದಾರೆ.

ಬಾಕಿ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವಾಲಯದ ಕಾರ್ಯದರ್ಶಿಗೆ ಮನವಿ ಸಲ್ಲಿಸಿರುವುದಾಗಿ ಯತೀಂದ್ರ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಹಣಕಾಸು ಆಯೋಗದ ಅನುದಾನ ಮಹತ್ವದ್ದಾಗಿದೆ. ಬಾಕಿ ಹಣ ಬಿಡುಗಡೆಯಾದರೆ ರಾಜ್ಯದ ನಗರ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೆ ನೆರವಾಗುವ ನಿರೀಕ್ಷೆಯಿದೆ.

ಇಂದು ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಶ್ರೀ ಸತ್ಯೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ, ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ (ULBs) 15ನೇ ಹಣಕಾಸು ಆಯೋಗದಡಿ ಬಾಕಿ ಇರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿ, ಈ ಕುರಿತು ಚರ್ಚಿಸಲಾಯಿತು.

2025–26ನೇ ಸಾಲಿನಲ್ಲಿ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು ₹1,385 ಕೋಟಿ ಅನುದಾನ ನಿಗದಿಯಾಗಿದೆ. ಇದರಲ್ಲಿ ₹887 ಕೋಟಿ ರಾಜ್ಯದ ಇತರೆ 316 ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ₹498 ಕೋಟಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (GBA) ಮೀಸಲಿಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಹಂಚಿಕೆಯಾದ ಒಟ್ಟು 887 ಕೋಟಿ ಬಿಡುಗಡೆಗೆ ಬಾಕಿ ಉಳಿದಿದೆ.

ಈ ಬಾಕಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವ ಮೂಲಕ ನಮ್ಮ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವಂತೆ ಮನವಿ ಮಾಡಲಾಯಿತು.

#newdelhi

— Dr Yathindra Siddaramaiah (@Dr_Yathindra_S) October 8, 2026

Leave a Reply

Your email address will not be published. Required fields are marked *

You may have missed