ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ: ಯಾಕೆ ಗೊತ್ತಾ?

bsy -yadiyurappa

ಬೆಂಗಳೂರು: ಜೀವಬೆದರಿಕೆ ಹಿನ್ನಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಪ್ರಮುಖರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ.

ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂಬ ಕೇಂದ್ರ ಗುಪ್ತಚರ ವಿಭಾಗದ ಮಾಹಿತಿ ಆಧಾರದಲ್ಲಿ ಯಡಿಯೂರಪ್ಪ ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ..

ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ಬಿ.ಎಸ.ವೈ. ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

You may have missed