ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

rain

ಕರ್ನಾಟಕದ ಕರಾವಳಿ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಗಳಿದ್ದು,, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಶ್ಲೇಷಿಸಿದೆ.

You may have missed