ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

0
accident

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರೆಲ್ಲರೂ ಕೆಲಸ ಮುಗಿಸಿಕೊಂಡು ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿಯೊಂದು ಕ್ರೂಸರ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಒಂದೇ ಕುಟುಂಬದ ಐವರು ಒಂದೇ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಇಂಗಳಗಿ ಗ್ರಾಮದಲ್ಲಿ ಶೋಕ ಮಡುಗಟ್ಟುವಂತೆ ಮಾಡಿದೆ.

Leave a Reply

Your email address will not be published. Required fields are marked *