ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

0

ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದೆ.

ಕರ್ನಾಟಕದಲ್ಲಿ ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ತಿಂಗಳಲ್ಲಿ 33 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 16 ಸಕ್ರಿಯ ಪ್ರಕರಣಗಳಿವೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್‌ಗಳ ಸಂಖ್ಯೆ 257 ಇದೆ ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಇನ್‌ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You may have missed