‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

0
Yash-Toxic

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆಕಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ನಾಲ್ಕು ವರ್ಷಗಳಿಂದ ಚಿತ್ರಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು ಫ್ಯಾನ್ ಶೋಗಳಿಗೆ ಮುಗಿಬಿದ್ದಿದ್ದಾರೆ.

ವಿಶ್ವಾದ್ಯಂತ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿರುವ ಸಿನಿಮಾ, ಕರ್ನಾಟಕದಲ್ಲಿ 1,500ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಮುಂಜಾನೆ ಶೋಗಳಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೊದಲ ದಿನವೇ ‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಭಾರತದಲ್ಲಿ ₹120.75 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. 24,579 ಪ್ರದರ್ಶನಗಳಲ್ಲಿ ಚಿತ್ರ ಭರ್ಜರಿ ಗಳಿಕೆ ಕಂಡಿದೆ.

ಹಿಂದಿ ಆವೃತ್ತಿಗೆ ಭಾರೀ ಕ್ರೇಜ್ ವ್ಯಕ್ತವಾಗಿದ್ದು, ಮೊದಲ ದಿನ ₹55 ಕೋಟಿ ನೆಟ್ ಗಳಿಕೆ ಕಂಡಿದೆ ಎನ್ನಲಾಗಿದೆ. ಕನ್ನಡದಲ್ಲಿ ₹23.30 ಕೋಟಿ, ತೆಲುಗಿನಲ್ಲಿ ₹16 ಕೋಟಿ, ತಮಿಳಿನಲ್ಲಿ ₹5.50 ಕೋಟಿ ಹಾಗೂ ಮಲಯಾಳಂನಲ್ಲಿ ₹1.30 ಕೋಟಿ ನೆಟ್ ಕಲೆಕ್ಷನ್ ಆಗಿದೆ.

ವಿದೇಶಿ ಮಾರುಕಟ್ಟೆಯಲ್ಲೂ ಚಿತ್ರ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಮೊದಲ ದಿನ ಸುಮಾರು ₹20 ಕೋಟಿ ಗ್ರಾಸ್ ಗಳಿಸಿದೆ ಎನ್ನಲಾಗಿದೆ. ಇದರೊಂದಿಗೆ ‘ಟಾಕ್ಸಿಕ್’ ಮೊದಲ ದಿನದ ವಿಶ್ವಾದ್ಯಂತ ಒಟ್ಟು ಗಳಿಕೆ ₹140.75 ಕೋಟಿಗೆ ತಲುಪಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *