ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲ ಫ್ಯಾಕ್ಟರಿಗಳಿಗೆ ಭೇಟಿ ನೀಡಿ ಪರಿಶೀಲಿಸಲು ಪೊಲೀಸರಿಗೆ ಆದೇಶ

0
police hoysala crime

ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ ತಿಳಿಸಿರುವ ಅವರು, ರಾಜ್ಯದಲ್ಲಿ ಯಾವುದೇ ರೀತಿಯ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ ಎಂದಿದ್ದಾರೆ.

ಎಲ್ಲ ರೀತಿಯ ಫ್ಯಾಕ್ಟರಿಗಳಿಗೆ ಆಯಾ ವ್ಯಾಪ್ತಿಯ ಸ್ಥಳೀಯ ಪೊಲೀಸರು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಫ್ಯಾಕ್ಟರಿಯಲ್ಲಿನ ಕಾರ್ಯಚಟುವಟಿಕೆ ಹಾಗೂ ಅಲ್ಲಿ ಬಳಸಲಾಗುವ ಕೆಮಿಕಲ್‌ಗಳು, ಯಂತ್ರಗಳ ಕುರಿತು ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ಗೃಹ ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed