ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

0
TVK- Vijay Thalapathy 4

ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚಿಸಲು ಸಕ್ರೀಯ ಪ್ರಯತ್ನ ಆರಂಭಿಸಿದೆ. 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ, ಬಹುಮತದ ಗಡಿಯಿಂದ ಸ್ವಲ್ಪ ದೂರದಲ್ಲಿದ್ದರೂ ಅಧಿಕಾರದ ಗದ್ದುಗೆ ಹಿಡಿಯುವತ್ತ ಹೆಜ್ಜೆ ಇಟ್ಟಿದೆ.

ಚುನಾವಣೆಯಲ್ಲಿನ ಸಾಧನೆ ಆಧಾರವಾಗಿ ಟಿವಿಕೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ (Rajendra Vishwanath Arlekar) ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದೆ. ಜೊತೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ಎರಡು ವಾರಗಳ ಅವಧಿ ಕೋರಲಾಗಿದೆ.

ಬಹುಮತದ ಕೊರತೆ ಎದುರಿಸುತ್ತಿರುವ ಟಿವಿಕೆ, ಇತರ ಪಕ್ಷಗಳ ಬೆಂಬಲಕ್ಕಾಗಿ ಚರ್ಚೆ ಆರಂಭಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಬೆಂಬಲ ಮಹತ್ವ ಪಡೆದುಕೊಂಡಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿರುವುದಾಗಿ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ (K.C. Venugopal) ತಿಳಿಸಿದ್ದಾರೆ.

ಆದರೆ ಈ ಕುರಿತು ಅಂತಿಮ ನಿರ್ಧಾರ ತಮಿಳುನಾಡು ಕಾಂಗ್ರೆಸ್ ಸಮಿತಿಯ ಕೈಯಲ್ಲಿದೆ ಎಂದು ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ. “ಈ ಜನಾದೇಶ ಜಾತ್ಯತೀತ ಸರ್ಕಾರಕ್ಕಾಗಿ ಬಂದಿದೆ. ವಿಜಯ್ ಅವರ ಪಕ್ಷವನ್ನು ಬೆಂಬಲಿಸುವ ಬಗ್ಗೆ ತಮಿಳುನಾಡು ಕಾಂಗ್ರೆಸ್ ಸಮಿತಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ,” ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *