ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

0
Bangalore-traffic-police-tractors-issue5-300x210-2

ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಎಂದು ಬಿಂಬಿಸಲಾಗಿರುವ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವುದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ಖಂಡಿಸಿರುವ ರೈತರು, ಭೂಮಿ ಕಳೆದುಕೊಳ್ಳುವ ಆತಂಕ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರದ ಎಪಿಎಂಸಿ ಆವರಣದಲ್ಲಿರುವ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಬಿಡದಿಯ ಬಿಜಿಎಸ್ ವೃತ್ತದಿಂದ ಬೈರಮಂಗಲ ಗ್ರಾಮದವರೆಗೆ ಬೈಕ್ ರ್ಯಾಲಿ ಹಾಗೂ ಬೃಹತ್ ಮೆರವಣಿಗೆ ಆಯೋಜಿಸಲಾಗಿದ್ದು, ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಹಾಗೂ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಯೋಜನೆಯನ್ನು ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *