ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು.
ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಹರಿಯಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬಿ ಕೆ ಹರಿಪ್ರಸಾದ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.