ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

0
udupi rain1

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಏಪ್ರಿಲ್ 6ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಏಪ್ರಿಲ್ 6ರವರೆಗೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕೂಡ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

You may have missed