ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ.
ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ, ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣಾಂಶ ಇಳಿಮುಖವಾಗುವ ಸಾಧ್ಯತೆ ಎಂದು ವಿಶ್ಲೇಷಿಸಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ.